ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಆ. 08ರಂದು ಮಂಗಳವಾರ ದಂದು ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿ ಬಳಿ, ಪೂರ್ವಭಾವಿ ಸಭೆ ನಡೆಯಲಿದೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದರಿಂದ ಉಂಟಾಗುವ ಸಮಸ್ಯೆಯ ಬಗ್ಗೆ 2012ರಿಂದ ಇದುವರೆಗೆ ಹೋರಾಟ ಮಾಡಿಕೊಂಡು ಬಂದಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮುಂದಾಳು ಕಿಶೋರ್ ಶಿರಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Friday
- April 4th, 2025