Ad Widget

ಅಜ್ಜಾವರ : ಪತ್ನಿಯ ಕೊಲೆಗೆ ಯತ್ನ – ಆರೋಪಿಗೆ ನ್ಯಾಯಾಂಗ ಬಂಧನ

ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ಎಂಬಲ್ಲಿನ ಅಬ್ದುಲ್ ನವಾಝ್ ಎಂಬ ಯುವಕ ಮೂರು ವರ್ಷಗಳ ಹಿಂದೆ ರಿಹಾ ಫಾತಿಮ ಎಂಬುವವರನ್ನು ಮದುವೆಯಾಗಿದ್ದರು. ಇತ್ತೀಚೆಗೆ ದಾಂಪತ್ಯದಲ್ಲಿ ವೈಮನಸ್ಸು ಉಂಟಾಗಿ ಪತಿ ತನಗೆ ಕಿರುಕುಳ ನೀಡುತ್ತಿದ್ದು,ಇದೀಗ ಕೊಲೆಗೆ ಯತ್ನಿಸಿದ್ದಾರೆಂದು ಗಂಡನ ವಿರುದ್ಧ ಮಹಿಳೆ ಪೋಲೀಸರಿಗೆ ದೂರು ನೀಡಿದ ಘಟನೆ ಆ.2 ರಂದು ವರದಿಯಾಗಿದೆ.

. . . . .

ಮಹಿಳೆ ನೀಡಿದ ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯವು ಹಲ್ಲೆ, ದಿಂಬನ್ನು ಮುಖಕ್ಕೆ ಒತ್ತಿಹಿಡಿದು ಉಸಿರು ಗಟ್ಟಿಸಿ ವಿಕೃತವಾಗಿ ವರ್ತಿಸುವುದು ಹಾಗೂ ತನ್ನ ತಂದೆಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಸುಳ್ಯ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೋಲಿಸ್ ಅಧಿಕಾರಿಗಳು ಆರೋಪಿ ಯುವಕ ಅಬ್ದುಲ್ ನವಾಝ್ ನನ್ನು ಬಂಧಿಸಿ, ಆ.3 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!