- Thursday
- November 21st, 2024
ಸುಳ್ಯ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ದಿನ ನಿತ್ಯ ಸಾವಿರಾರು ಭಕ್ತಾದಿಗಳು ಬಂದು ಹೋಗುತ್ತಿದ್ದು ಮಾತ್ರವಲ್ಲದೆ ತೊಡಿಕಾನ ಭಾಗದ ಸಾರ್ವಜನಿಕರಿಗೆ , ವಿದ್ಯಾರ್ಥಿಗಳಿಗೆ ಸಂಚರಿಸಲು ವಾಹನದ ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ತೊಡಿಕಾನ ಭಾಗದ ಜನತೆ ಆ ಭಾಗದ ಪಂಚಾಯತ್ ಸದಸ್ಯರಾದ ರವೀಂದ್ರ ಪಂಜಿಕೋಡಿ ಇವರಲ್ಲಿ ಮನವಿ ಮಾಡಿದ್ದರು. ಈ ಬಗ್ಗೆ ಗ್ರಾ.ಪಂ.ಸದಸ್ಯರು...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾ| ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕರಾದ ರಾಷ್ಟ್ರ ಪ್ರಶಸ್ತಿ ಪುರಸ್ಕತ...
ರಾಜ್ಯ ಕಾಂಗ್ರೆಸ್ ಸಿದ್ದರಾಯ್ಯ ಹಾಗೂ ಡಿಕೆ ಶಿವಕುಮಾರ್ ನೇತ್ರತ್ವದಲ್ಲಿ ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ಅನುಷ್ಠಾನ ಮಾಡುತ್ತಿದ್ದು ಗೃಹ ಜ್ಯೋತಿ , ಶಕ್ತಿ , ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ನಿರುದ್ಯೋಗಿ ಭತ್ಯೆ ಸೇರಿದಂತೆ ಎಲ್ಲವನ್ನು ಅನುಷ್ಠಾನಕ್ಕೆ ತರುತ್ತಿದ್ದು ಶಕ್ತಿ ಮತ್ತು ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯು ಜನತೆಯ ಕೈ ಸೇರಿದ್ದು,...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ "DISCOVER SCI"ವಿಜ್ಞಾನ ಮಾದರಿ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಮುಖ್ಯ ಅತಿಥಿಗಳಾಗಿ,ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಮಾಲಿನಿ ಕೆ.ಅವರು ಮಾತನಾಡಿ ಪ್ರತಿಯೊಬ್ಬರಿಗೂ ಬದುಕುವ ಕಲೆ ಮುಖ್ಯ.ದೈನಂದಿನ ಜೀವನದಲ್ಲಿ ವಿಜ್ಞಾನದ...
ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್ವೊಂದಕ್ಕೆ ಕಳ್ಳರು ನುಗ್ಗಿರುವ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು ನುಗ್ಗಿ ಕೈಚಳಕ ತೋರಲು ಪ್ರಯತ್ನ ಪಟ್ಟಿದ್ದಾರೆ. ಹೊಟೇಲ್ ಮಾಲೀಕ ಚೆನ್ನಪ್ಪ...
ಪೆರುವಾಜೆ ಗ್ರಾಮ ಪಂಚಾಯತ್ ರಸ್ತೆ ಗೆ ಮಣ್ಣು ಹಾಕಿರುವ ದಾಮೋದರ ನಾಯ್ಕ ಅವರು ಗ್ರಾಮ ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ವಿರುದ್ಧ ನೀಡಿರುವ ದಲಿತ ನಿಂದನೆ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ.ನನ್ನ ಬಗ್ಗೆ ಸುಳ್ಳು ಆರೋಪ ನೀಡಿರುವ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವುದು ಅನಿವಾರ್ಯ. ಅನಗತ್ಯವಾಗಿ ಕಿರುಕುಳ ನೀಡಿ, ವಾಟ್ಸ್ ಆ್ಯಪ್...
ಮಂಡೆಕೋಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಕಾರ್ಯಕರ್ತರಾದ ಪೇರಾಲು ಗುತ್ತು ಬಾಬಣ್ಣ ರೈ ಯವರು ಇಂದು ಮುಂಜಾನೆ ದೈವಾಧೀನರಾಗಿದ್ದಾರೆ. ಅವರು ಅಪಾರ ಸಂಖ್ಯೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಮಾರ್ಗದರ್ಶನ ನೀಡಿದ್ದರು. ಮೃತರು ನಾಲ್ಕು ಪುತ್ರರು ಹಾಗೂ ಓರ್ವ ಪುತ್ರಿ ಸೇರಿ ಅಪಾರ ಸಂಖ್ಯೆಯಲ್ಲಿ ಶಿಷ್ಯರನ್ನು ಅಗಲಿದ್ದಾರೆ ಮೃತರ ಅಂತಿಮ ದರ್ಶನ ಅವರ ಸ್ವಗೃಹದಲ್ಲಿ...