
ರಾಜ್ಯ ಕಾಂಗ್ರೆಸ್ ಸಿದ್ದರಾಯ್ಯ ಹಾಗೂ ಡಿಕೆ ಶಿವಕುಮಾರ್ ನೇತ್ರತ್ವದಲ್ಲಿ ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ಅನುಷ್ಠಾನ ಮಾಡುತ್ತಿದ್ದು ಗೃಹ ಜ್ಯೋತಿ , ಶಕ್ತಿ , ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ನಿರುದ್ಯೋಗಿ ಭತ್ಯೆ ಸೇರಿದಂತೆ ಎಲ್ಲವನ್ನು ಅನುಷ್ಠಾನಕ್ಕೆ ತರುತ್ತಿದ್ದು ಶಕ್ತಿ ಮತ್ತು ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯು ಜನತೆಯ ಕೈ ಸೇರಿದ್ದು, ಆಗಸ್ಟ್ 15 ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತವಾಗಿ ಚಾಲಣೆ ನೀಡಲಿದ್ದು ,ಅರ್ಜಿ ಅಹ್ವಾನ ಈಗಾಗಲೇ ನಡೆಯುತ್ತಿದ್ದು ತಮ್ಮ ತಮ್ಮ ಗ್ರಾಮಗಳ ಗ್ರಾಮ ಒನ್ , ಕರ್ನಾಟಕ ಒನ್ , ಗ್ರಾಮ ಪಂಚಾಯತ್ ಕಛೇರಿಗಳಲ್ಲಿ ನೋಂದಣಿ ಮಾಡಿಕೊಂಡು ನಮ್ಮ ಸರಕಾರದ ಎಲ್ಲಾ ಸೌಲಭ್ಯಗಳನ್ನು ನಾಡಿನ ಜನತೆ ಪಡೆದುಕೊಳ್ಳಿ ಹಾಗೂ ಈ ಭಾರಿಯ ಸ್ವಾತಂತ್ರ್ಯ ದಿನಾಚರಣೆಗೆ ರಾಜ್ಯಾ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಉಡುಗೊರೆಯಾಗಿ ಈ ಯೋಜನೆ ಜಾರಿಯಾಗುತ್ತಿದ್ದು ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತಂದ ಕಾಂಗ್ರೆಸ್ ಸರಕಾರಕ್ಕೆ ಅಭಿನಂದನೆಗಳು ಎಂದು ಸುಳ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.