ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ.
ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಮಾನನಷ್ಟ ಮೊಕದ್ದಮೆ ಮತ್ತು ಸಂಸತ್ ಸದಸ್ಯತ್ವದಿಂದ ಅನರ್ಹ ಮತ್ತು 2 ವರ್ಷದ ಶಿಕ್ಷೆ ವಿಧಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿ ಸತ್ಯ, ಧರ್ಮ, ನ್ಯಾಯಕ್ಕೆ ಗೆಲುವಾಗಿದೆ. ಈ ಗೆಲುವು ರಾಹುಲ್ ಗಾಂಧಿಯವರ ಲೋಕಸಭಾ ಕ್ಷೇತ್ರವಾದ ವಯನಾಡ್ ಕ್ಷೇತ್ರದ ಜನತೆಗೆ ಸಿಕ್ಕಿದ ಗೆಲುವು. ಮತ್ತು ಇಡೀ ದೇಶದ ಜನತೆಗೆ ದೊರೆತ ಗೆಲುವಾಗಿದೆ. ಆ ಪ್ರಯುಕ್ತ ಸುಳ್ಯ ಕಾಂಗ್ರೆಸ್ ಮುಖಂಡರುಗಳಾದ ಮಾಜಿ ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷ ಗೋಕುಲ್ ದಾಸ್, ಮಾಜಿ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಬಳ್ಳಡ್ಕ ಇಂದು ಸಂಜೆ ಸುಳ್ಯದ ಪ್ರಸಿದ್ಧ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ರಾಹುಲ್ ಗಾಂಧಿಯವರ ಮುಂದಿನ ರಾಜಕೀಯ ಜೀವನದಲ್ಲಿ ದುಷ್ಟ ಶಕ್ತಿ ಗಳ ಕಿರುಕುಳ, ದ್ವೇಷ ರಾಜಕಾರಣದ ಪ್ರಭಾವ ಬೀರದಂತೆ, ಹಾಗೂ ಅವರ ಮುಂದಿನ ರಾಜಕೀಯ ಜೀವನ ಉತ್ತುಂಗಕ್ಕೆ ಏರಲಿ ಹಾಗೂ ಅವರ ನಾಯಕತ್ವದಲ್ಲಿ ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಯಾಗಲಿ, ಸರ್ವಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು ಎಂದು ತಿಳಿಸಿದ್ದಾರೆ .