
ಕನಕಮಜಲು ಗ್ರಾಮ ಪಂಚಾಯತ್ ಎರಡನೇ ಅವದಿಗೆ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾ.ಪಂ ಒಟ್ಟು 7 ಸಂಖ್ಯ ಬಲದ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಐದು ಮಂದಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಎರಡು ಮಂದಿ ಸದಸ್ಯರುಗಳಿದ್ದಾರೆ.ಸಾಮಾನ್ಯ ಮಹಿಳಾ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಶಾರದಾ ಉಗ್ಗಮೂಲೆ ಹಾಗೂ ಸಾಮಾನ್ಯ ಸ್ಥಾನ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಸದಸ್ಯರಾದ ರವಿಚಂದ್ರ ಕಾಪಿಲ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಸಹಾಯಕ ತೋಟಗಾರಿಕಾ ಅಧಿಕಾರಿ ಜಗದೀಶ್ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.