Ad Widget

“ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್(ರಿ.)ಸುಳ್ಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಅ.10ರಂದು ಸುಳ್ಯ ಬಂಟರ ಭವನದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆಯನ್ನು ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷರು ಸುರೇಶ್‌ ಕಣೆಮರಡ್ಕರವರು ಉದ್ಘಾಟಿಸಿ ಶುಭ ಹಾರೈಸಿದರು. ಸದ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಲೋಕನಾಥ ಅಮೆಚೂರು, ಅಧ್ಯಕ್ಷರು, ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ರವರು ವಹಿಸಿದರು.  ಸದ್ರಿ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪ್ರಾಧೇಶಿಕ ನಿರ್ದೇಶಕರು, ವಿವೇಕ್‌ ವಿನ್ಸೆಂಟ್‌ ಪಾಯಸ್‌ ರವರು ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರನ್ನು ಉದ್ದೇಶಿಸಿ ತುರ್ತು ಸಂದರ್ಭದಲ್ಲಿ  ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು. ಸದ್ರಿ  ಕಾರ್ಯಕ್ರಮದಲ್ಲಿ ಶ್ರೀಪ್ರವೀಣ್‌ ಕುಮಾರ್‌ ಜಿಲ್ಲಾ ನಿರ್ದೇಶಕರು   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ದ.ಕ ಜಿಲ್ಲೆ-2,  ಶ್ರೀ ನಾಗೇಶ್‌ ಪಿ ಯೋಜನಾಧಿಕಾರಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಮಹೇಶ್‌ ಕುಮಾರ್‌  ರೈ ಮೇನಾಲ, ನಿಕಟ ಪೂರ್ವ ಅಧ್ಯಕ್ಷರು, ಜನಜಾಗೃತಿ ವೇದಿಕೆ ಸುಳ್ಯ ತಾಲೂಕು. ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಶ್ರೀ ಜೈವಂತ ಪಟೆಗಾರ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading