ಆಲೆಟ್ಟಿ ಗ್ರಾಮದ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ ಯಾಗಿರುವ ಘಟನೆ ಇದೀಗ ವರದಿಯಾಗಿದೆ.
ಸ್ಥಳೀಯರು ನದಿಗೆ ಗಾಳ ಹಾಕಲು ನಡೆದುಕೊಂಡು ಹೋಗುತ್ತಿರುವವರಿಗೆ ಕಂಡಿದ್ದು ಅವರು ಕೂಡಲೇ ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸುದೇಶ್ ಅರಂಬೂರು ರವರಿಗೆ ವಿಷಯ ತಿಳಿಸಿದರು. ಸುಳ್ಯ ಪೋಲಿಸರಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು ಇದೀಗ ಪೋಲಿಸ್ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ವ್ಯಕ್ತಿಗಳ ಮಾಹಿತಿ ಪ್ರಕಾರ ಗಂಡಸಿನ ಶವ ಆಗಿರಬೇಕು ಎಂದು ಆಡಿಕೊಳ್ಳುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.