Ad Widget

ಗುತ್ತಿಗಾರು : ಗ್ರಂಥಪಾಲಕರ ದಿನಾಚರಣೆ ಹಾಗೂ ಮಕ್ಕಳ ಕಥಾ ಸಂಕಲನ ಬಿಡುಗಡೆ

ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಕಿರಣರಂಗ ಅಧ್ಯಯನ ಸಂಸ್ಥೆ(ರಿ.) ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ಗ್ರಂಥಾಲಯ ಪಿತಾಮಹ ಡಾ| ಎಸ್.ಆರ್.ರಂಗನಾಥನ್ ಜನ್ಮದಿನೋತ್ಸವ, ಗ್ರಂಥಪಾಲಕರ ದಿನಾಚರಣೆ, ಮಕ್ಕಳ ಕಥಾ ಸಂಕಲನ ಬಿಡುಗಡೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವು ಆ.13 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಸಣ್ಣ ಕಥೆ ಬರೆಯುವ ಸ್ಪರ್ಧೆಯಲ್ಲಿ ಗ್ರಾಮದ 58 ವಿದ್ಯಾರ್ಥಿ ಲೇಖಕರು ಬರೆದ ಸಣ್ಣ ಕಥೆಗಳ “ಚಿಣ್ಣರ ಶೃಂಗಾರ” ಕಥಾ ಸಂಕಲನವನ್ನು ನಿವೃತ್ತ ಪ್ರಾಂಶುಪಾಲರಾದ ಬಾಬು ಮಾಸ್ತರ್ ಬಿಡುಗಡೆಗೊಳಿಸಿ “ಗ್ರಂಥಾಲಯ ಒಂದು ಜ್ಞಾನಕೋಶ, ಇದರ ಬಳಕೆ ಮಾಡಿ ಜೀವನಕ್ಕೆ ಅಳವಡಿಸಿಕೊಳ್ಳುವಂತಾಗಬೇಕು ; ವಿದ್ಯಾರ್ಥಿಗಳು ಭವಿಷ್ಯದ ಭರವಸೆಯ ಲೇಖಕರಾಗಿ ಮೂಡಿಬರಲಿ” ಎಂದು ಹಾರೈಸಿದರು. ಜಂಟಿ ಸಂಸ್ಥೆಗಳು ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನಿವೃತ್ತ ಮುಖ್ಯ ಶಿಕ್ಷಕರಾದ ಜತ್ತಪ್ಪ ಮಾಸ್ತರ್ ಚಿಲ್ತಡ್ಕ ಅಭಿನಂದನಾ ಪತ್ರ ಹಾಗೂ ಪುಸ್ತಕ ನೀಡಿ ಆಶೀರ್ವದಿಸಿ ಮಕ್ಕಳ ಗೀತೆಯನ್ನು ಹಾಡಿದರು. ಈ ಸಂದರ್ಭದಲ್ಲಿ ಅವರು ತಮ್ಮಲ್ಲಿದ್ದ ಅತ್ಯುತ್ತಮ 36 ಮಕ್ಕಳ ಪುಸ್ತಕಗಳನ್ನು ಗ್ರಂಥಾಲಯಕ್ಕೆ ದೇಣಿಗೆಯಾಗಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ರೇವತಿ ಆಚಳ್ಳಿ ವಹಿಸಿದ್ದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮುಳಿಯ ಕೇಶವ ಭಟ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಉಪಸ್ಥಿತರಿದ್ದರು. ಕಿರಣರಂಗ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಯೋಗೀಶ್ ಹೊಸೋಳಿಕೆ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕರಾದ ಅಭಿಲಾಷಾ ಮೋಟ್ನೂರು ಗ್ರಂಥಾಲಯ ಪಿತಾಮಹ ಡಾ| ಎಸ್.ಆರ್ ರಂಗನಾಥನ್ ಅವರ ಜೀವನ ಚರಿತ್ರೆಯನ್ನು ಪ್ರಾಸ್ತಾವಿಕ ಮಾತುಗಳಿಂದ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು. ಕಥೆ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಜಯಪ್ರಕಾಶ್, ಚೋಮಯ್ಯ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

. . . . . . .

(ವರದಿ : ಉಲ್ಲಾಸ್ ಕಜ್ಜೋಡಿ)


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading