
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜೋರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು. ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರ್ ಗಣ್ಯ ವ್ಯಕ್ತಿಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ನಿಯೋಜಿತ ಅಧ್ಯಕ್ಷರಾದ ಶ್ರೀಮತಿ ನಮಿತಾ ರೈ. ಹಾಗೂ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರು ವಸಂತ ಉಲ್ಲಾಸ್ ಹಾಗೂ ಸದಸ್ಯರು, ಹಾಸ್ಟೆಲ್ ಸಿಬ್ಬಂದಿಗಳು , ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಮಕ್ಕಳು ಹಾಗೂ ಪೋಷಕರು, ಆಶಾ ಕಾರ್ಯಕರ್ತೆ ಹಾಗೂ ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಭಾರತಿ.ಕೆ ಸ್ವಾಗತಿಸಿದರು. ಬಾಲವಿಕಾಸ ಸಮಿತಿಯ ಅಧ್ಯಕ್ಷರು ಶ್ರೀಮತಿ ದಿವ್ಯಾ ಪಡ್ಪು ವಂದಿಸಿದರು. ಅಂಗನವಾಡಿ ಸಹಾಯಕಿ ಸುಜಾತಾ ಬಸ್ತಿಗುಡ್ಡೆ ಸಹಕರಿಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ನಿಂದ ಸಿಹಿ ತಿಂಡಿ ನೀಡಿ ಸಹಕರಿಸಿದರು.
