
ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ಆನಂದ ಚಿಲ್ಪಾರು, ಸತ್ಯಪ್ರಸಾದ ಪಿಲಿಕಜೆ, ಚೊಕ್ಕಾಡಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಯು. ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ, ಪೋಷಕರು, ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕಿ ಸಂಧ್ಯಾಕುಮಾರಿ ಸ್ವಾಗತಿಸಿದರು.

