
ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಎಸ್.ಪಿ. ಲೋಕನಾಥರವರು ಮಾಡಿದರು. ಶಾಲಾ ಮುಖ್ಯ ಗುರುಗಳಾದ ಹನುಮಂತಪ್ಪರವರು ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಉಷಾಲತಾ ರವರು ಧನ್ಯವಾದ ಸಮರ್ಪಣೆ ಯನ್ನು ಮಾಡಿದರು. ಸಹಶಕ್ಷಕಿಯರಾದ ಶ್ರೀಮತಿ ಭವಿತ ಮತ್ತು ಶ್ರೀಮತಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಎಸ್. ಡಿ. ಎಮ್. ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಊರ ವಿದ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

