Ad Widget

ಸುಳ್ಯ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

. . . . .

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ಬಳಿಕ ಆಕರ್ಷಕ ಪಥವಸಂಚಲನ ನಡೆಯಿತು ಪಥಸಂಚಲನದಲ್ಲಿ ಪೊಲೀಸ್, ಹೊಂ ಗಾರ್ಡ್ಸ್, ಮಾಜಿ ಸೈನಿಕರು, ಎನ್‌ಸಿಸಿ, ಸ್ಕೌಟ್ಸ್ ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳ ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ತಹಶೀಲ್ದಾರ್ ಮಂಜುನಾಥ್ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯ ಸಂದೇಶ ನೀಡಿದರು. ಹಲವಾರು ಹೋರಾಟಗಳ ಮೂಲಕ ಅನೇಕ ಚಳವಳಿಗಳ ಮೂಲಕ ಪಡೆದ ನಮ್ಮ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ದೇಶಕ್ಕಾಗಿ ಹೋರಾಟ ನಡೆಸಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸುವುದು ನಮ್ಮೆಲ್ಲರ ಹೆಮ್ಮೆ ಎಂದು ಅವರು ಹೇಳಿದರು.ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡುತ್ತಾ ರಾತ್ರಿ ಹನ್ನೆರಡು ಗಂಟೆಗೆಯು ರಸ್ತೆಯಲ್ಲಿ ಮಹಿಳೆಯರು ನಡೆಯುವ ಹಾಗೆ ಆಗಬೇಕು ಹಾಗು ಈ ಹಿಂದೆ ಭಾರತವನ್ನು ವಿಶ್ವದ ಇತರ ದೇಶಗಳು ಕಡೆಗಣಿಸುತ್ತಿದ್ದವು ಆದರೆ ಇಂದು ರತ್ನಗಂಬಳಿ ಹಾಸಿ ಕರೆಯುತ್ತಿದೆ ಎಂದು ಹೇಳಿದರು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮಾತನಾಡಿ ತಾಲೂಕು ಆಡಳಿತವು ಸುಳ್ಯದಲ್ಲಿ ಸೈನಿಕರ ಸ್ಮಾರಕ ನಿರ್ಮಿಸಬೇಕು ಹಾಗೂ ಕಾಂತಮಂಗಲದ ವೀರ ಯೋಧನ ಕುರಿತು ಮಾತನಾಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಸರೋಜಿನಿ ಪೆಲ್ತಡ್ಕ, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಠ್, ಪೂಜಿತಾ ಕೆ.ಯು, ಶಿಲ್ಪಾ ಸುದೇವ್, ಶಶಿಕಲಾ‌ ನೀರಬಿದಿರೆ, ಪ್ರವಿತಾ ಪ್ರಶಾಂತ್, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಹೆಚ್.ಎಂ.‌, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಆರಕ್ಷಕ ಉಪನಿರೀಕ್ಷಕ ಈರಯ್ಯ ದೂಂತೂರು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿವೃತ್ತ ಸೈನಿಕರಾದ ವೀರಪ್ಪ ಗೌಡ ಕೆ ಅವರನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಾದ ಸೃಷ್ಠಿ ಎಸ್. ಹಾಗೂ ಖುಷಿ ‘ನನ್ನ ದೇಶ ನನ್ನ‌ ಮಣ್ಣು’ ಎಂಬ ವಿಷಯದ ಬಗ್ಗೆ ಮಾತನಾಡಿದರು‌. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ ವಂದಿಸಿದರು. ಶಿಕ್ಷಕಿ ಮಮತ ಎಸ್.ಕೆ ಹಾಗು ಶಿಕ್ಷಣ ಸಂಯೋಜಕ ನಳಿನಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖಾ ಅಧಿಕಾರಿಗಳು , ವಿದ್ಯಾರ್ಥಿಗಳು ,ನಾಗರಿಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!