Ad Widget

ಎಣ್ಮೂರು : ಸ್ವಾತಂತ್ರ್ಯ ದಿನಾಚರಣೆ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಶರೀಫ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಪಂಜ ಲಯನ್ಸ್ ಕ್ಲಬ್ ವತಿಯಿಂದ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರ ಕೊಡುಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಡಮಂಗಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರೇವತಿ ಇವರು ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲೋಕನಾಥ ರೈ ಪಟ್ಟೆ ಗ್ರಾಮ ಪಂಚಾಯತ್ ಸದಸ್ಯರಾದ ಮಾಯಲಪ್ಪ ಗೌಡ ದಿವ್ಯ ಯೋಗಾನಂದ ಸವಿತಾ ಕಲ್ಲೇರಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ರೈ ವಾಣಿ ಟೆಕ್ಸ್ ಟೈಲ್ಸ್ ಮಾಲಕರಾದ ಮತ್ತು ಅಸ್ಮಿ ವಾಯುಮಾಲಿನ್ಯ ತಪಾಸಣಾ ಕೇಂದ್ರದ ಮಾಲಕರಾದ ಸುಜಿತ್ ರೈ ಪಟ್ಟೆ ಎಸ್ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಶರೀ ಫ್ ಉಪಾಧ್ಯಕ್ಷ ಸುನಿತಾ ಮತ್ತು ಮುಖ್ಯ ಗುರುಗಳಾದ ಭುವನೇಶ್ವರಿ ಕೆ ಉಪಸ್ಥಿತರಿದ್ದರು. ಶಾಲೆಗೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿದ ವಾಣಿ ಟೆಕ್ಸ್ ಟೈಲ್ಸ್ ಮಾಲಕರಾದ ವೀಣಾ ಕರುಣಾಕರ್ ಮತ್ತು ಲೇಖನಿ ಸಾಮಗ್ರಿಗಳನ್ನು ನೀಡಿದ ಅನ್ನಪೂರ್ಣ ಟೆಕ್ಸ್ಟೈಲ್ಸ್ ನ ಮಾಲಕರಾದ ಲಿಖಿನ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಕೊಡುಗೆ ನೀಡಿದ ಸುಜಿತ್ ರೈ ಪಟ್ಟೆ ಇವರನ್ನು ಗುರುತಿಸಿ ಗೌರವಿಸಲಾಯಿತು ಸಹ ಶಿಕ್ಷಕಿ ಶಾಂತಮ್ಮ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಭಾಷಣವನ್ನು ಮಾಡಿದರು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಸುರೇಖಾ ಇವರು ನೆರವೇರಿಸಿದರು ಶಿಕ್ಷಕಿ ಗುಲಾಬಿ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading