Ad Widget

ಐವರ್ನಾಡು ಸಹಕಾರಿ ಸಂಘಕ್ಕೆ ಶೇ. 100 ಸಾಲ ವಸೂಲಾತಿಗಾಗಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.

. . . . . .

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರು ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಎಸ್.ಎನ್ ಮನ್ಮಥ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಯವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ವಾಸುದೇವ ಬೊಳುಬೈಲು,ಮಹೇಶ್ ಜಬಳೆ, ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!