- Thursday
- November 21st, 2024
ಸುಳ್ಯದ ವಿವೇಕಾನಂದ ವೃತ್ತದಿಂದ ಮಂಡೆಕೋಲು ಕಡೆಗೆ ತೆರಳುವ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ ಮಳೆನೀರು ಹರಿಯುತ್ತಿದೆ. ನಗರ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ರಸ್ತೆಯಲ್ಲಿ ಚರಂಡಿ ನಿರ್ಮಿಸದೇ ಕಾಂಕ್ರೀಟ್ ರಸ್ತೆ ನಿರ್ಮಿಸಿದ್ದು ಒಂದು ಚಿಕ್ಕ ಮಳೆ ಬಂದಾಗ ಎಲ್ಲಾ ನೀರು ರಸ್ತೆಯಲ್ಲಿ ಹರಿದು ವಿದ್ಯಾರ್ಥಿಗಳಿಗೆ ಪಾದಚಾರಿಗಳಿಗೆ , ದ್ವಿಚಕ್ರ ವಾಹನ ಸವಾರರಿಗೆ ಬಹಳಷ್ಟು ಸಮಸ್ಯೆ ಉಂಟುಮಾಡುತ್ತಿದೆ. ರಿಕ್ಷಾ,ಜೀಪು,ಕಾರು...
ಮರ್ಕಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ನಡೆಯಿತು. ನೂತನ ಅಧ್ಯಕ್ಷರಾದ ಗೀತಾ ಹೊಸೋಳಿಕೆ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮೊಟ್ಟೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಸಂಧ್ಯಾ ಸೇವಾಜೆ ,ಗ್ರಾಮ ಪಂಚಾಯತ್ ಸದಸ್ಯರಾದ ನಾಗವೇಣಿ ಶೆಟ್ಟಿಮಜಲು, ಮರ್ಕಂಜ ಪ್ರೌಢಶಾಲೆಯ ಶಿಕ್ಷ ಕರಾದ ಪ್ರವೀಣ ಕುಮಾರಿ ಮತ್ತು ಶಿಕ್ಷ...
ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಆಡಳಿತಾಧಿಕಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಆ. 19 ರಂದು ನಡೆದಿದೆ. ಅರಂತೋಡು, ತೊಡಿಕಾನ ಹಾಗೂ ಸಂಪಾಜೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿರುವ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲೋಕಾಯುಕ್ತ ಎಸ್ ಪಿ ಸೈಮನ್ ಆಗಮಿಸಿ ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ....
ಹೃದಯದಿಂದ ನಿರಂತರವಾಗಿ ರಕ್ತ ದೇಹದ ಎಲ್ಲಾ ಅಂಗಗಳಿಗೆ ಸರಬರಾಜು ಆಗುತ್ತಲೇ ಇರುತ್ತದೆ. ಹೃದಯದಿಂದ ರಕ್ತ ಹೊರಹಾಕಲ್ಪಟ್ಟ ಮೇಲೆ ರಕ್ತದ ಏಕಮುಖ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಹೇರುವ ಒತ್ತಡವನ್ನು “ರಕ್ತದ ಒತ್ತಡ” ಎಂದು ಕರೆಯಲಾಗುತ್ತದೆ. ಆರೋಗ್ಯವಂತ ಮಧ್ಯ ವಯಸ್ಕ ಮಹಿಳೆ ಮತ್ತು ಪುರುಷರಲ್ಲಿ ರಕ್ತದ ಒತ್ತಡವು 120/80 ಮಿಲಿ ಮೀಟರ್‍ನಷ್ಟು (ಪಾದರಸ ಕಂಬದ ಎತ್ತರ) ಇರುತ್ತದೆ....
ಸುಳ್ಯ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ತೀರ್ಥ ಕುಮಾರ್ ಕುಂಚಡ್ಕ, ಕೃಪಾ ಶಂಕರ ತುದಿಯಡ್ಕ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ್ ಪೈಕ, ಎನ್ ಎ ರಾಮಚಂದ್ರ, ಜಗದೀಶ್ ಸರಳಿಕುಂಜ, ವಿನಯ್ ಕುಮಾರ್ ಕಂದಡ್ಕ, ರಜತ್...
ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎನೆಕಲ್ಲು ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ವೃಕ್ಷ ಸಂರಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 25 ಕಲ್ಪವೃಕ್ಷಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಸಂಕಲ್ಪ ಕೈಗೊಳ್ಳಲಾಯಿತು . ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಪ್ರಶಾಂತ್ ಕೋಡಿಬೈಲು ಕಲ್ಪವೃಕ್ಷ ನೀಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷ ವಿಶ್ವನಾಥ ...
ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಅರಂತೋಡು ಹಾಗೂ ಸಂಪಾಜೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿ ಮಿಯಾಸಾಬ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಹಣ ಮತ್ತು ಇತರೆ ತಪಾಸಣೆಗಳನ್ನು ಲೋಕಾಯುಕ್ತ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇವಾರಿಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ 8...
ಮಡಪ್ಪಾಡಿ ಗ್ರಾಮ ಪಂಚಾಯಿತಿಗೆ ಮುಂದಿನ ಎರಡುವರೆ ವರ್ಷದ ಅವಧಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಮಿತ್ರದೇವ ಮಡಪ್ಪಾಡಿಯವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಉಷಾ ಜಯರಾಮ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಜಾತ ಹಾಡಿಕಲ್ಲುರವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...