ಕೇಂದ್ರ ಹಾಗೂ ರಾಜ್ಯ ಸರಕಾರ ನಿಷೇಧಿಸಿದ ಪ್ಲಾಸ್ಟಿಕ್ ಕವರ್ ಗಳನ್ನು ಸುಳ್ಯದಲ್ಲಿ ಮಾರಾಟ ಹಾಗೂ ಬಳಕೆ ಮಾಡದಂತೆ ನಗರ ಪಂಚಾಯತ್ ಜನಜಾಗೃತಿ ಮೂಡಿಸಿತ್ತು. ಆದರೂ ಅಂಗಡಿ ಮುಂಗಟ್ಟುಗಳಿಗೆ ಮಾರಾಟ ಮಾಡುತ್ತಿರುವ ವಿಚಾರ ತಿಳಿದ ನಗರ ಪಂಚಾಯತ್ ಇಂದು ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಸಹಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಗಳನ್ನು ವಿಚಾರಿಸಿದಾಗ ಪೋಲಿಸ್ ದೂರು ನೀಡಲಾಗುವುದು ಹಾಗೂ ಈ ಕುರಿತಂತೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅಮರ ಸುದ್ದಿಗೆ ತಿಳಿಸಿದ್ದಾರೆ.