ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಆ.22 ರಂದು ಬೆಳಿಗ್ಗೆ 11 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸದೇ ಯಥಾವತ್ತಾಗಿ ಮತ್ತು ಕರ್ನಾಟಕ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಕ್ರಮಕೈಗೊಳ್ಳುತ್ತಿದ್ದು, ಇದನ್ನು ವಿರೋಧಿಸಿ ಈ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಸಮಾನ ಮನಸ್ಕರು, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- April 3rd, 2025