Ad Widget

ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಿದ ಶಾಸಕಿ ಭಾಗೀರಥಿ ಮುರುಳ್ಯ

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ಪ್ರಮುಖರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಿದರು. ನಂತರ ಎಲ್ಲರಂ ಗ್ರಾಮ ದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಜತೆಯಾದರು. ಸ್ಥಳೀಯ ಬುಡಕಟ್ಟು ಜನಾಂಗದ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸಿ ನಂತರ ವಿವಿಧ ಚುನಾವಣೆ ಪ್ರಚಾರದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!