ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಚಂದ್ರಯಾನ -3 ಆಗಸ್ಟ್ 23ರಂದು ಸಂಜೆ ಗಂಟೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದರಲ್ಲಿ ಐತಿಹಾಸಿಕ ಗೆಲುವಿಗಾಗಿ, ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತೀಯ ಇಸ್ರೋ ವಿಜ್ಞಾನಿಗಳ ತಂಡದ ಐತಿಹಾಸಿಕ ಸಾಧನೆಯನ್ನು ಪ್ರಶಂಸಿಸಿ, ಆ.24 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸಂಭ್ರಮವನ್ನು ಆಚರಿಸಿ, ವಿಜ್ಞಾನಿಗಳ ಸಾಧನೆಯನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಮತಿ ವಿಮಲ ರಂಗಯ್ಯ, ಸಂಸ್ಥೆಯ ಕೋಶಾಧಿಕಾರಿ ವಾಸುದೇವ ನಡ್ಕ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿಯ ಎಸ್‌ಡಿಎಂಸಿ ಅಧ್ಯಕ್ಷ ದಾವೂದ್ ಮುಚ್ಚಿಲ, ಮುಖ್ಯ ಶಿಕ್ಷಕಿ ಧರ್ಮಾವತಿ, ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಎಸ್ , ಉಪಾಧ್ಯಕ್ಷ ದಾಮೋದರ ನೆರಳ , ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ವಿವಿಧ ಶಾಲೆಗಳ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಶಿಕ್ಷಕರು ಈ ಸಂಭ್ರಮದಲ್ಲಿ ಭಾಗವಹಿಸಿದರು.