Ad Widget

ಪೇರಾಲು ಅಂಬ್ರೋಟಿ: ಸಾರ್ವಜನಿಕ ವರ ಮಹಾಲಕ್ಷ್ಮಿ ಪೂಜೆ

ಮಂಡೆಕೋಲು ಗ್ರಾಮದ ಪೇರಾಲು- ಅಂಬ್ರೋಟಿಯ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಶ್ರೀರಾಮ ಭಜನಾ ಮಂದಿರದ ವತಿಯಿಂದ ಆ. 25ರಂದು ಪೇರಾಲು ಅಂಬ್ರೋಟಿ ಶ್ರೀರಾಮ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಜರಗಿತು. ಪುರೋಹಿತ ಮೂರೂರು ಗಣೇಶ್ ಭಟ್ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮದಲ್ಲಿ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಮಹಾಪೂಜೆ ನಡೆಯಿತು.

. . . . . . . . .

ರಕ್ಷಾಬಂಧನದ ಬಳಿಕ ಸಾರ್ವಜನಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಸುಳ್ಯ ಶ್ರೀ ಕೇಶವ ಕೃಪಾದ ಶ್ರೀಮತಿ ಶ್ರೀದೇವಿ ನಾಗರಾಜ್ ಭಟ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಬಳಿಕ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading