Ad Widget

ಮಾವಿನಕಟ್ಟೆ : ಓಣಂ ಸಂಭ್ರಮಕ್ಕೆ ಚಾಲನೆ

ಮಾವಿನಕಟ್ಟೆ ಶ್ರೀ ವಿಷ್ಣು ಸೇವಾ ಸಮಿತಿ ನೇತೃತ್ವದಲ್ಲಿ ಓಣಂ ಆಚರಣೆ ಆಯೋಜಿಸಿದ್ದು ಇಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಷ್ಣುಮೂರ್ತಿ ದೈವದ ಪರಿಚಾರಕ ಭಾಸ್ಕರ ಬೆಳ್ಳಪಾಡ ತಳೂರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಸಮಿತಿಯ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು, ಶ್ರೀ ವಿಷ್ಣು ಸೇವಾ ಸಮಿತಿಯ ಅಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆ ಹಾಗೂ ಕಾರ್ಯದರ್ಶಿ ಕೃಷ್ಣಕುಮಾರ್ ನಾರ್ಣಕಜೆ ಉಪಸ್ಥಿತರಿದ್ದರು. ನಾಗೇಶ್ ತಳೂರು ಸ್ವಾಗತಿಸಿ, ವಂದಿಸಿದರು.

. . . . . . . . .

ಕಾರ್ಯಕ್ರಮದ ಅಂಗವಾಗಿ ಸಮುದಾಯದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆ ನಡೆಯಲಿದೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದದಲ್ಲಿ
ಹತ್ತನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸಮುದಾಯದ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading