ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿಬಹುದು.
ಹುದ್ದೆಗಳ ವಿವರ ಈ ರೀತಿ ಇದೆ –
1. ದ್ವಿತೀಯ ದರ್ಜೆ ಗುಮಾಸ್ತರು – 123 ಹುದ್ದೆಗಳು
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರು ತಿಂಗಳ ಕಂಪ್ಯೂಟರ್ ಕೋರ್ಸ್
ವೇತನ ಶ್ರೇಣಿ : 24910-55655.
2) ಕಂಪ್ಯೂಟರ್ ಪ್ರೋಗ್ರಾಮರ್ – 2 ಹುದ್ದೆಗಳು.
ವಿದ್ಯಾರ್ಹತೆ: ಎಂಸಿಎ ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ.
ವೇತನ ಶ್ರೇಣಿ : 36985-89600.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಕೆ ವಿಧಾನ:-
ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ಸೈಟ್‌ನಲ್ಲಿ ಸಿಗುವ ನೇಮಕಾತಿ ಅರ್ಜಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಸಲ್ಲಿಸಿದ ಅರ್ಜಿಯ ಪ್ರಿಂಟ್ ತೆಗೆದು, ಫೋಟೋ ಲಗತ್ತಿಸಿ, ಸಹಿ ಮಾಡಿ, ಎಲ್ಲಾ ಪ್ರಮಾಣ ಪತ್ರಗಳ ಪ್ರತಿ ದಿನಾಂಕ 20-09-2023ರ ಅಪರಾಹ್ನ 4-30ರ ಒಳಗೆ ಮುಖ್ಯ ಕಾರ್ಯನನಿರ್ವಹಣಾಧಿಕಾರಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಕೊಡಿಯಾಲಬೈಲ್, ಮಂಗಳೂರು ಇವರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.
ಅರ್ಜಿ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ.
https://recruitment.scdccbank.com/
ಅರ್ಜಿ ಶುಲ್ಕ:-
ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು – ರೂ.590/-
ಇತರರಿಗೆ – ರೂ.1180/-
ವಯಸ್ಸಿನ ಮಿತಿ:-
SC/ST -40 ವರ್ಷಗಳು
OBC – 38 ವರ್ಷಗಳು.
ಇತರರು – 35 ವರ್ಷಗಳು
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ .