ಜುಲೈ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ 7 ದಿವಸಗಳ ರಜೆ ನೀಡಲಾಗಿತ್ತು. ಈ ರಜಾ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ತರಗತಿ ನಷ್ಟವನ್ನು ಭರ್ತಿ ಮಾಡಲು ಸಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆಗಳನ್ನು ನಡೆಸುವಂತೆ ಆದೇಶಿಸಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದ.ಕ.ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.
- Thursday
- November 21st, 2024