- Sunday
- November 24th, 2024
ಸುಳ್ಯದ ಅರಂಬೂರು ಜಂಕ್ಷನ್ ಬಳಿ ಮರಕ್ಕೆ ಬೆಂಕಿ ತಗುಲಿದ ಘಟನೆ ವರದಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು ತಕ್ಷಣವೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೀಟಿ ಮರಕ್ಕೆ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.
ಸ ಕಿ ಪ್ರಾ ಶಾಲೆ ನೇಲ್ಯಡ್ಕ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯaನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶಾಲಾ ಮಕ್ಕಳು ಭಾರತೀಯ ಸಾಂಸ್ಕೃತಿಕ ಉಡುಗೆಗಳನ್ನು ತೊಟ್ಟು ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ಭಾರತ ಎಂದು ಹಾಡಿ ಕುಣಿದು ಘೋಷಣೆ ಕೂಗಿದರು . ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಕೆ ರಘುನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ವಜಾರೋಹಣ ಗೈದು...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಶರೀಫ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಪಂಜ ಲಯನ್ಸ್ ಕ್ಲಬ್ ವತಿಯಿಂದ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರ ಕೊಡುಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ನಂತರ ಸಭಾ...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಶಾಲೆಯು ಶಿಥೀಲ ವ್ಯವಸ್ಥೆಯಲ್ಲಿದ್ದು ಈ ಹಿಂದಿನಿಂದಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು ಈ ಹಿನ್ನಲೆಯಲ್ಲಿ ಇಂದು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಹಾಗೂ ಇಲಾಖಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸ್ಪೀಕರ್ ಗಮನಕ್ಕೆ ತಂದು ತಕ್ಷಣವೇ ಟೆಂಡರ್ ಪ್ರಕ್ರಿಯೆ ನಡೆಸಲು...
ಶ್ರೀ ವಾಣಿ ವನಿತಾ ಸಮಾಜ(ರಿ) ಸುಬ್ರಮಣ್ಯ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಸುಳ್ಯ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ (ರಿ) ಸುಬ್ರಮಣ್ಯ, ಅಂಬಿಕಾ ಗೊಂಚಲು ಸಮಿತಿ ಸುಬ್ರಮಣ್ಯ (ಸ್ತ್ರೀಶಕ್ತಿ), ಅಂಗನವಾಡಿ ಕೇಂದ್ರ ಸುಬ್ರಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮವನ್ನು ಸುಬ್ರಮಣ್ಯ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಪ್ರೆಸ್...
ಸುಳ್ಯ ನಗರದ ತ್ಯಾಜ್ಯವನ್ನು ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕದ ಹೊರಗೆ ಜನವಸತಿ ಪ್ತದೇಶದ ಸಮೀಪದ ಅರಣ್ಯದಲ್ಲಿ ಹಾಕಲಾಗಿದ್ದು ಈ ತ್ಯಾಜ್ಯವನ್ನು ಎರಡು ದಿನಗಲ್ಲಿ ತೆರವು ಮಾಡದಿದ್ದರೇ ಕಸವನ್ನು ನಾವೇ ತಂದು ನಗರ ಪಂಚಾಯತ್‌ನ ಮುಂಭಾಗದಲ್ಲಿ ಹಾಕಿ ಪ್ರತಿಭಟನೆ ನಡೆಸುವುತ್ತೇವೆ ಎಂದು ಕಲ್ಚರ್ಪೆ ಪರಿಸರ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯ ಅಶೋಕ್...
ಹೊಂಬೆಳಕು ಬಳಗ ನಾಲ್ಕೂರು ಇದರ ವತಿಯಿಂದ ಸ್ವಚ್ಛತಾ ಕಾರ್ಯ ಹಾಗೂ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ ಆ.13 ರಂದು ನಡುಗಲ್ಲಿನಲ್ಲಿ ನಡೆಯಿತು. ನಾಲ್ಕೂರು ಗ್ರಾಮ ಆಡಳಿತಾಧಿಕಾರಿ ಕಛೇರಿ ಆವರಣ ಸ್ವಚ್ಛತೆ ಹಾಗೂ ನಡುಗಲ್ಲು ಶಾಲೆಯಲ್ಲಿ ಹಣ್ಣಿನ ಗಿಡ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ,ಶಾಲಾ ವಿದ್ಯಾರ್ಥಿ...
ನಿಡುಬೆ ಸ.ಕಿ.ಪ್ರಾ.ಶಾಲೆಯಲ್ಲಿ 76 ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಚಂದ್ರಕಲಾ ಇವರು ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರ ಮೋಹನ್, ಉಪಾಧ್ಯಕ್ಷರಾದ ಶ್ರೀಮತಿ ಸುಂದರಿ, ಶಾಲಾಭಿವದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಕಲಾ, ಪೋಷಕರು, ಮಕ್ಕಳು, ಶಾಲಾಭಿಮಾನಿಗಳಾದ ಸ್ವಾತಿಕ್ ಕುದುಂಗು, ಶ್ರೀಮತಿ ಮಿಥುನ ಅಶ್ವತ್ಥ್ ಜಬಳೆ,...
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ನಡೆಯಿತು. ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ್ ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ನಿಯೋಜಿತ ಅಧ್ಯಕ್ಷರಾದ ಕೇಶವ ಅಡ್ತಲೆ, ನಿವೃತ್ತ ಸೈನಿಕ ಉತ್ತಪ್ಪ ಮುಂಡೋಡಿ ಮತ್ತು ಸುಳ್ಯ ಪಶು ವೈದ್ಯಕೀಯ ಇಲಾಖೆಯ...
ಸಾಹಿತ್ಯ ಸಂಗೀತ ಕಲಾ ಕೇಂದ್ರ ಸುಳ್ಯ, ಅರಂತೋಡು ಶಾಖೆ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗಾನ ನಮನ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಆ.15ರಂದು ಸುಳ್ಯದ ವೆಂಕಟ್ರಮಣ ದೇವ ಮಂದಿರದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಸಂಗೀತ ಕಲಾಕೇಂದ್ರದ ನಿರ್ದೇಶಕಿ ಆರತಿ ಪುರುಷೋತ್ತಮ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ...
Loading posts...
All posts loaded
No more posts