Ad Widget

ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬಿಜೆಪಿ ಶಾಸಕರಿಂದ ಸಿ.ಎಂ ಗೆ ಮನವಿ – ಶಾಸಕಿ ಭಾಗೀರಥಿ ಮುರುಳ್ಯ ಸಾಥ್

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
          ಬಿಜೆಪಿ ಶಾಸಕರ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು  ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಹರೀಶ್ ಫೂಂಜಾ , ಭರತ್ ಶೆಟ್ಟಿ ವೇದವ್ಯಾಸ ಕಾಮತ್ ಸುನಿಲ್ ಕುಮಾರ್ ಕಾರ್ಕಳ ಮತ್ತಿತರರು ಉಪಸ್ಥಿತರಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!