ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ೧೦ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ಶೋಭಯಾತ್ರೆ ಜರುಗಲಿದೆ ಎಂದು ಭಜರಂಗದಳ ಸಂಯೋಜಕ ಹರಿಪ್ರಸಾದ್ ಎಲಿಮಲೆ ತಿಳಿಸಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನಾಚನೆಯ ಅಂಗವಾಗಿ 10 ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಸೆ. 16ರಂದು ಮಧ್ಯಾಹ್ನ 2 ಕ್ಕೆ ಸರಿಯಾಗಿ ಶ್ರೀ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಉದ್ಘಾಟನೆಯನ್ನು ಡಾ. ಹರಪ್ರಸಾದ್ ತುದಿಯಡ್ಕ ಅನುವಂಶಿಕ ಮೊಕ್ತೇಸರರು ನೆರವೇರಿಸಲಿದ್ದಾರೆ. ಆ ಬಳಿಕ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯಲ್ಲಿ ವೀರಯುವಕರಿಂದ ಸಾಹಸಮಯ ಆಟ್ಟಿ ಮಡಿಕೆ ಒಡೆಯುವುದು, ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭವಾಗಿ ಎ.ಪಿ.ಎಂ.ಸಿ, ಕುರುಂಜಿಭಾಗ್, ವಿವೇಕಾನಂದ ಸರ್ಕಲ್, ಜೂನಿಯರ್ ಕಾಲೇಜು ರಸ್ತೆ, ಮುಳಿಯ ಮೈದಾನ, ಶಾಸ್ತ್ರಿ ವೃತ್ತ, ವಿಶ್ವ ಸೆಂಟ್ರಲ್ ಶ್ರೀ ರಾಮಪೇಟೆ ಸುಳ್ಯ, ಶ್ರೀಹರಿ ಕಾಂಪ್ಲೆಕ್ಸ್, ರಾಜಶ್ರೀ ಕಾಂಪ್ಲೆಕ್ಸ್, ಪಂಚಾಯತ್ ಬಸ್ ನಿಲ್ದಾಣ, ನಾಯರ್ ಕಾಂಪ್ಲೆಕ್ಸ್, ಗಾಂಧಿನಗರ, ಐಡಿಯಲ್ ಆಟೋ ವರ್ಕ್ಸ್, ಭಗವತಿ ಹಾರ್ಡ್ ಚೆನ್ನಕೇಶವ ದೇವಸ್ಥಾನದ ಮೈದಾನದ ಬಳಿ ವಿಶೇಷ ಆಕರ್ಷಣೆ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯು ನಡೆಯಲಿದ್ದು ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ ರೂ.15000, ದ್ವಿತೀಯ 10000 ಮತ್ತು ತೃತೀಯ 7000 ಮತ್ತು ಶಾಶ್ವತ ಹಾಗೂ ಕಾರ್ಯಕ್ರಮದ ಅಂತ್ಯದವರೆಗೆ ಭಾಗವಹಿಸಿದ ತಂಡಗಳಿಗೆ ಪ್ರೋತ್ಸಾಹಕ ಬಹುಮಾನ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವಿವರ ನೀಡಿದರು. ವಿಶ್ವ ಹಿಂದು ಪರಿಷದ್ ಅಧ್ಯಕ್ಷರಾದ ಸೋಮಶೇಖರ್ ಪೈಕ ಮಾತನಾಡಿ ನಮ್ಮ ಈ ಕಾರ್ಯಕ್ರಮದಲ್ಲಿ ಪೂರ್ವ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಹಾಗೂ ಈ ಕಾರ್ಯಕ್ರಮದಲ್ಲಿ ಸಮಸ್ತ ಹಿಂದು ಭಾಂಧವರು ಭಾಗವಹಿಸಬೇಕು ಎಂದು ಹೇಳಿದರು. ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾದ ತೀರ್ಥಕುಮಾರ್ ಕುಂಚಡ್ಕ ಮಾತನಾಡಿ ಈ ಬಾರಿಯ ಮೆರವಣಿಗೆಯಲ್ಲಿ ಆಕರ್ಷಣೆಯಾಗಿ ಕಲ್ಲಡ್ಕ ಗೊಂಬೆ , ನಾಸಿಕ್ ಬ್ಯಾಂಡ್ , ಪಿಲಿನಲಿಕೆ ಇರಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ಉಪಾಧ್ಯಕ್ಷರಾದ ರಜತ್ ಅಡ್ಕಾರ್, ಪ್ರಕಾಶ್ ಯಾದವ್, ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ, ಕಾರ್ಯದರ್ಶಿ ಸಂದೀಪ್ ವಳಲಂಬೆ, ಕೋಶಾಧಿಕಾರಿ ನವೀನ್ ಎಲಿಮಲೆ, ವ್ಯವಸ್ಥಾ ಪ್ರಮುಖರಾದ ಭಾನುಪ್ರಕಾಶ್ ಪೆಲ್ತಡ್ಕ , ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ಭಾನುಪ್ರಕಾಶ್ ಪೆರುಮುಂಡ ಉಪಸ್ಥಿತರಿದ್ದರು.
- Saturday
- November 23rd, 2024