Ad Widget

ಬಡವರ ಬಗ್ಗೆ ಕಾಳಜಿ ಇಲ್ಲದ, ಸಾಮಾಜಿಕ ಉದ್ದಾರದ ಇಚ್ಛಾಶಕ್ತಿ ಇಲ್ಲದ ಬಿಜೆಪಿಯವರಿಗೆ ಕಾಂಗ್ರೆಸ್ ನಾಯಕರಬಗ್ಗೆ, ಕಾಂಗ್ರೆಸ್ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ : ಕೆ ಗೋಕುಲ್ ದಾಸ್

ಎಲ್ಲಾ ಸರಕಾರಗಳೂ ನಡೆಯುವುದೇ ಜನರ ತೆರಿಗೆಯಿಂದಲೇ ಬಿಜೆಪಿ ಸರಕಾರಗಳು, ಕೇಂದ್ರ ಸರಕಾರ ಜನರ ತೆರಿಗೆಯನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳಿಗೆ ನೀಡುತ್ತಿದ್ದರೆ, ನಮ್ಮ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರಿಗೆ, ಮಹಿಳೆಯರಿಗೆ ನೀಡುತ್ತಿದ್ದಾರೆ. ಆ ಮೂಲಕ ಬಡವರ, ರಾಜ್ಯದ ಅಭಿವೃದ್ಧಿಗೆ ಪ್ರಯತ್ನಿಸುತ್ತಿದ್ದಾರೆ. ಇದನ್ನು ಮಾಡಲು ಇಚ್ಛಾಶಕ್ತಿ ಬೇಕು. ಬಿಜೆಪಿಯವರಿಗೆ ಇಚ್ಚಾಶಕ್ತಿಯ ಕೊರತೆ ಇದೆ. ಅವರಿಂದ ಇದನ್ನು ನಿರೀಕ್ಷೆಯನ್ನು ಮಾಡಬೇಕಾಗಿಲ್ಲ. ಬಿಜೆಪಿಯವರಿಗೆ ಶ್ರೀಮಂತರ ಜೇಬು ತುಂಬಿಸಿದರೆ ಸಾಕು.ಸುಳ್ಯದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ನಮ್ಮ ಪಕ್ಷದಲ್ಲಿ ಉಚ್ಚಾಟನೆ, ಶೋಕಾಸ್ ನೋಟಿಸ್ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಆಂತರಿಕ ವಿಷಯ. ನಾವೆಲ್ಲರೂ ಈಗಾಗಲೇ ಜಾರಿಯಾಗಿರುವ ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ, ಸಂಘಟನೆಯಲ್ಲಿ ಜೊತೆಯಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಬಿಜೆಪಿಯವರು ಮೊದಲು ತಮ್ಮ ಪಕ್ಷದ ಬಗ್ಗೆ ಯೋಚನೆಮಾಡಲಿ. ಸರಕಾರ ಬಂದು 117ದಿನ ಕಳೆದರೂ ಸಹ ಒಬ್ಬ ವಿಪಕ್ಷ ನಾಯಕನನ್ನು ಮಾಡಲು ಆಗಿಲ್ಲ. ಹೊಸ ರಾಜ್ಯಧ್ಯಕ್ಷರನ್ನು ಆಯ್ಕೆ ಮಾಡಲು ಯೋಗ್ಯತೆ ಇಲ್ಲದವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕೆ ಗೋಕುಲ್ ದಾಸ್ ಕಠುವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!