ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ,ಎನ್ ಎಸ್ ಎಸ್ ಮತ್ತು ಇತಿಹಾಸ ಹಾಗೂ ರಾಜ್ಯಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯ ಪ್ರಯುಕ್ತ ಭಾರತ ಸಂವಿಧಾನದ ಪೀಠಿಕೆ ಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮ ಏರ್ಪಡಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ವಹಿಸಿ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು .ದಿನದ ಮಹತ್ವವನ್ನು ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಗೀತಾ ಮುಡೂರು ಮಾಹಿತಿ ನೀಡಿದರು. ಶ್ರೀ.ಸ್ವಾಮಿ.ಎಸ್ ಸಹಾಯಕ ಪ್ರಾಧ್ಯಾಪಕರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪರಿಚಾರಕರಾದ ಶ್ರೀಮತಿ ಗೀತಾ ಜಿ ಭಾಗವಹಿಸಿದ್ದರು.
- Thursday
- November 21st, 2024