ದಾನಗಳಲ್ಲಿ ಹಲವು ವಿಧದ ದಾನಗಳಿವೆ. ಅನ್ನದಾನ, ವಸ್ತ್ರದಾನ, ವಿದ್ಯಾದಾನ ಇವೆಲ್ಲವುಗಳಿಂದಲೂ ಮುಖ್ಯವಾದ ರಕ್ತದಾನ. ರಕ್ತದಾನ ಶ್ರೇಷ್ಠವಾದ ದಾನ. ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಗಳಿಲ್ಲ. ತುರ್ತು ಸಂದರ್ಭಗಳಲ್ಲಿ ರಕ್ತ ಬೇಕಾದಲ್ಲಿ ಬದಲಿ ವ್ಯವಸ್ಥೆಯಾಗಿ ಒಬ್ಬರ ದೇಹದಿಂದ ತೆಗೆದ ರಕ್ತವನ್ನೇ ಇನ್ನೊಬ್ಬರಿಗೆ ನೀಡಬೇಕಾಗುತ್ತದೆ. ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಪ್ರಭಾರ ಪ್ರಾಚಾರ್ಯ ಕೆ ದಿನೇಶ್ ನುಡಿದರು. ಅವರು ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕೆ. ಎಸ್. ಎಸ್. ಕಾಲೇಜ್ ಸುಬ್ರಹ್ಮಣ್ಯ. ಆಂತರಿಕ ಗುಣಮಟ್ಟ ಭರವಸಕೋಶ, ಇದರ ಆಶಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ,ಭಾರತ ಮತ್ತು ರೇಂಜರ್ಸ್ ಘಟಕ ,ಯುವ ರೆಡ್ ಕ್ರಾಸ್ ಘಟಕ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ, ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಮತ್ತು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ಸಂಯೋಜಕೀ ಲತಾ ಬಿ.ಟಿ, ಏ.ಜೆ .ಬ್ಲಡ್ ಬ್ಯಾಂಕ್ ಮಂಗಳೂರು ಗುಣಮಟ್ಟ ಮತ್ತು ತಾಂತ್ರಿಕ ಅಧಿಕಾರಿ ಪಿ .ಆರ್. ಗೋಪಾಲಕೃಷ್ಣ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ಅಧ್ಯಕ್ಷ ವಿವೇಕಾನಂದ ದೇವರಗದ್ದೆ, ಸುಬ್ರಮಣ್ಯ ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ರು ರಂಗಯ್ಯ ಶೆಟ್ಟಿಗಾರ್, ಕೋಶಾಧಿಕಾರಿ ಚಂದ್ರಶೇಖರ ಪಾಣತ್ತಿಲ್ಲ ,ರೋವರ್ಸ್ ಅಂಡ್ ರೆಂಜರ್ಸ್ ಘಟಕದ ಸಂಯೋಜಕೀ ಪ್ರಮೀಳಾ, ಯೂತ್ ರೆಡ್ ಕ್ರಾಸ್ ಸಂಯೋಜಕ ಸೃಜನ್ ಮುಂಡೋಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಆರತಿ ಅವರು ಸ್ವಾಗತಿಸಿದರು. ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿ ಸತೀಶ ಕೂಜುಗೋಡು ಧನ್ಯವಾದ ಸಮರ್ಪಿಸಿದರು.