ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಶೋಭಾಯಾತ್ರೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡಿತು. ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ತೆಂಗಿನಕಾಯಿ ಒಡೆದು ಧ್ವಜ ಹಾರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ವಿ.ಹೆಚ್.ಪಿ ಅಧ್ಯಕ್ಷ ಸೋಮಶೇಖರ ಪೈಕ, ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ, ಬಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ಸಮಿತಿಯ ಉಪಾಧ್ಯಕ್ಷ ರಜತ್ ಅಡ್ಕಾರ್, ಪ್ರಕಾಶ್ ಯಾದವ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರಮುಖರಾದ ಸುಬೋದ್ ಶೆಟ್ಟಿ ಮೇನಾಲ, ಸುನಿಲ್ ಕೇರ್ಪಳ, ಮಹೇಶ್ ರೈ ಮೇನಾಲ, ಸುನಿಲ್ ರೈ ಮೇನಾಲ, ಚನಿಯ ಕಲ್ತಡ್ಕ, ಜಗದೀಶ್ ಸರಳಿಕುಂಜ,ರವಿಚಂದ್ರ ಕೊಡಿಯಾಲಬೈಲು,ಹರೀಶ್ ರೈ ಉಬರಡ್ಕ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ಗಿರೀಶ್ ಕಲ್ಲುಗದ್ದೆ, ವರ್ಷಿತ್ ಚೊಕ್ಕಾಡಿ,ಭಾನುಪ್ರಕಾಶ್ ಪೆಲತ್ತಡ್ಕ, ಭಾನುಪ್ರಕಾಶ್ ಪೆರುಮುಂಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.
ಚೆನ್ನಕೇಶವ ದೇವಸ್ಥಾನದ ಮುಂಭಾಗ, ಎಪಿಎಂಸಿ, ಕುರುಂಜಿಭಾಗ್, ವಿವೇಕಾನಂದ ಸರ್ಕಲ್, ಜೂನಿಯರ್ ಕಾಲೇಜ್ ರಸ್ತೆ, ಮುಳಿಯ ಮೈದಾನ ಶಾಸ್ತ್ರಿ ವೃತ್ತ, ವಿಶ್ವ ಸೆಂಟ್ರಲ್ ಶ್ರೀರಾಮಪೇಟೆ ಸುಳ್ಯ, ಶ್ರೀಹರಿ ಕಾಂಪ್ಲೆಕ್ಸ್, ರಾಜಶ್ರೀ ಕಾಂಪ್ಲೆಕ್ಸ್, ಪಂಚಾಯತ್ ಬಸ್ ನಿಲ್ದಾಣ, ನಾಯರ್ ಕಾಂಪ್ಲೆಕ್ಸ್, ಗಾಂಧಿನಗರ, ಐಡಿಯಲ್ ಆಟೋ ವರ್ಕ್ಸ್ , ಭಗವತಿ ಹಾರ್ಡ್ ವೇರ್ಸ್ ರಥಬೀದಿ ಮುಂತಾದ ಕಡೆಗಳಲ್ಲಿ ಅಟ್ಟಿ ಮಡಕೆ ಒಡೆಯುವ ಆಕರ್ಷಕ ಸ್ಪರ್ಧೆ ನಡೆಯಿತು. 15 ಮಂದಿಯನ್ನು ಒಳಗೊಂಡ 16 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಚೆಂಡೆ, ವಾದ್ಯ ಮೇಳಗಳು, ಕಲ್ಲಡ್ಕ ಬೊಂಬೆಗಳು, ವಿವಿಧ ವೇಷಗಳು ಭಾರತಮಾತೆಯ ಸ್ಥಬ್ದ ಚಿತ್ರಗಳು ಮೆರವಣಿಗೆಗೆ ಮೆರುಗು ನೀಡಿತು. ನಗರದಲ್ಲಿ ಸಾಗಿ ಬಂದ ಶೋಭಾಯಾತ್ರೆಯಲ್ಲಿ ನೂರಾರು ಮಂದಿ ಜೈಕಾರ ಕೂಗಿ ಕುಣಿದು ಕುಪ್ಪಳಿಸಿದರು.
- Friday
- November 1st, 2024