Ad Widget

ವಿದೇಶದಲ್ಲಿ ಉದ್ಯೋಗದಲ್ಲಿರುವ ಪತಿಯಿಂದ ಸುಳ್ಯದ ಮಹಿಳೆಗೆ ತ್ರಿವಳಿ ತಲಾಖ್ – ಪ್ರಕರಣ ದಾಖಲು.

ಸುಳ್ಯ ಜಯನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ವರದಿಯಾಗಿದೆ.
ಮಿಸ್ರಿಯಾರವರು ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯ ಎಂಬ ಯುವತಿಯನ್ನು ವಿವಾಹವಾಗಿದ್ದರು.

. . . . . . . . .

ವಿವಾಹದ ಬಳಿಕ ಆಕೆಯನ್ನು ಉತ್ತಮವಾಗಿ ನೋಡಿಕೊಂಡಿದ್ದು ಈ ದಂಪತಿಗಳಿಗೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. 2 ವರ್ಷಗಳ ಮೊದಲು ತನ್ನ ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಅವರನ್ನು ಸುಳ್ಯಕ್ಕೆ ಕರೆತಂದು ಪತ್ನಿಯ ಮನೆಯಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತರೆಳಿದ್ದರು.

. . . . . . .

ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎನ್ನಲಾಗಿದ್ದು ಆದರೆ ಸಂಬಂಧಿಕರು, ಹಿರಿಯರು ಇದರ ಬಗ್ಗೆ ಮಾತನಾಡಿ ಅವರಿಗೆ ತಿಳಿ ಹೇಳುತ್ತಿದ್ದರು ಎನ್ನಲಾಗಿದೆ. ಆದರೆ ಇದು ಯಾವುದನ್ನು ಕೇಳದೆ ಏಕಾಏಕಿ ಪತಿ ರಾಶಿದ್, ಪತ್ನಿಯ ಮೊಬೈಲ್‌ಗೆ ಮೂರು ತಲಾಖ್‌ನ ವಾಟ್ಸಾಪ್ ಸಂದೇಶ ಕಳುಹಿಸಿದ್ದು, ಇದರಿಂದ ಮನನೊಂದ ಮಹಿಳೆ ಸುಳ್ಯ ಪೊಲೀಸರಿಗೆ ತನಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ.

ಪೊಲೀಸರು ಮುಸ್ಲಿಂ ಪ್ರೊಟೆಕ್ಷನ್ ಆಫ್ ರೈಟ್ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading