Ad Widget

ಸುಬ್ರಹ್ಮಣ್ಯ : ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಬಾಕಿಯಾಗಿದ್ದ ವೇತನ – ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಮನವಿಗೆ ಸ್ಪಂದಿಸಿದ ಸರಕಾರ

ಮಹೇಶ್ ಕುಮಾರ್ ಕರಿಕ್ಕಳ ಮನವಿಗೆ ಸ್ಪಂದಿಸಿದ ಸರಕಾರ&body=https://amarasuddi.com/2023/09/18/subrahmanya-college/">EmailEmail

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ  ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ  ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿದ್ದು ಸಂಕಷ್ಟ ಅನುಭವಿಸುವಂತಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಂಡಿರಲಿಲ್ಲ.

ಈ ಬಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾನ ಸಮಿತಿ ಮಾಜಿ ಸದಸ್ಯ ಹಾಗೂ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅವರಿಗೆ ಕಾಲೇಜಿನ ಸಿಬ್ಬಂದಿಗಳು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ  ಮುತುವರ್ಜಿ ವಹಿಸಿದ ಮಹೇಶ್ ಕುಮಾರ್ ಅವರು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದ್ದರು. ಕೂಡಲೇ ಸ್ಪಂದಿಸಿದ ಸಭಾಧ್ಯಕ್ಷರು ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!