
ಅರಂತೋಡು ಗ್ರಾಮ ಪಂಚಾಯತ್ ಗೆ ಸ್ವಚ್ಛತೆಗೆ ಜಿಲ್ಲಾ ರಾಜ್ಯ ಪ್ರಶಸ್ತಿ ಲಭಿಸಿದೆ ಈ ನಿಟ್ಟಿನಲ್ಲಿ ನಮ್ಮ ಗ್ರಾಮದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ವಿದ್ಯಾ ರ್ಥಿ ಗಳಿಗೆ ಕರೆ ನೀಡಿದರು.ಇವತ್ತಿನ ದಿನಗಳಲ್ಲಿ ಮಕ್ಕಳು ಚಾಕಲೇಟ್ ತಿಂದು ಸಿಪ್ಪೆಯನ್ನು ಅಲ್ಲಿಯೇ ಬಿಸಾಡುವ ಬದಲು ಅದನ್ನು ಸುರಕ್ಷಿತ ಕಸದ ಡಬ್ಬಗಳಿಗೆ ಹಾಕಿ ಸ್ವಚ್ಛತೆಯನ್ನು ಕಾಪಾಡಿ ಕೊಳ್ಳಬೇಕೆಂದು ಹೇಳಿದರು.ಅವರು ಆರಂತೋಡು ಪ್ರಾಥಮಿಕ ಶಾಲೆ ಯಲ್ಲಿ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.