
ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 21/9/23ರಂದು ನಡೆದ ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟದ ಪಂದ್ಯಾಟವು ಏನೆಕಲ್ ನಲ್ಲಿ ನಡೆಯಲಿದ್ದು, ಈ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ತಂಡಗಳು ಭಾಗವಹಿಸಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.