

ದ.ಕ. ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ದ.ಕ. ಜಿಲ್ಲೆ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಧಿಕಾರಿಯವರ ಕಛೇರಿ, ಸುಳ್ಯ ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಜಿಲ್ಲಾ ಮಟ್ಟದ ತ್ರೋ ಬಾಲ್ ಪಂದ್ಯಾಟ 2023-24ರ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸಿದ ಎಲ್ಲಾ ಏಳು ತಾಲೂಕಿನ ಶಾಲೆಯ ತಂಡಕ್ಕೆ ಶುಭಹಾರೈಸಿದರು.