
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಾಲೂಕು ಪಂಚಾಯತ್ ಸುಳ್ಯ, ಆರಂತೋಡು ಗ್ರಾಮ ಪಂಚಾಯತ್ ಮತ್ತು ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದಲ್ಲಿ ಅರಂತೋಡು ಅಮೃತ ಸಭಾ ಭವನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಹಿ ಸೇವಾ ವಿಶೇಷ ಗ್ರಾಮ ಸಭೆ ಹಾಗೂ ಯೋಧ ನಮನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ನಿವೃತ್ತ ಶಿಕ್ಷಕ ಕೆ.ಆರ್.ಗಂಗಾಧರ, ತಾ.ಪಂ. ಇಓ ರಾಜಣ್ಣ , ಗ್ರಾ.ಪಂ.ಉಪಾಧ್ಯಕ್ಷೆ ಭವಾನಿ ಸಿ.ಎ, ಪಿಡಿಓ ಜಯಪ್ರಕಾಶ್ ಎಂ.ಆರ್.ಮತ್ತಿತರರು ಉಪಸ್ಥಿತರಿದ್ದರು.



