Ad Widget

ಬಾರೀ ಮಳೆಯ ಕಾರಣ ಅ.3ರಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ


ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಅ.3ರಿಂದ ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಠಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.
ಕಡಿದಾದ ಬೆಟ್ಟವನ್ನು ಏರಲು ಮಳೆಯಿಂದಾಗಿ ಚಾರಣಿಗರಿಗೆ ಅತಿಯಾದ ಸಂಕಷ್ಟ ಮತ್ತು ಕಷ್ಟವಾಗುವ ಕಾರಣ ಇಲಾಖೆ ಅ.3ರಿಂದ ಮುಂದಿನ ಆದೆಶದ ತನಕ ಕುಮಾರಪರ್ವತ ಚಾರಣಕ್ಕೆ ನಿರ್ಬಂದ ವಿಧಿಸಿದೆ.ಆದುದರಿಂದ ಚಾರಣಿಗರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಇಲಾಖೆ ವಿನಂತಿಸಿದೆ. ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ ಇಲಾಖೆಯು ಬಿರು ಬೇಸಿಗೆ ಮತ್ತು ಅಧಿಕ ಮಳೆಯ ಕಾರಣದಿಂದಾಗಿ ಚಾರಣೀಗರಿಗೆ ಕುಮಾರಪರ್ವತ ಪ್ರಯಾಣಕ್ಕೆ ನಿರ್ಭಂಧ ವಿದಿಸಿತ್ತು.ಶನಿವಾರದಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು. ಈ ಕಾರಣದಿಂದ ಶನಿವಾರ,ಆದಿತ್ಯವಾರ ಬೃಹತ್ ಸಂಖ್ಯೆಯಲ್ಲಿ ಚಾರಣಿಗರು ಆಗಮಿಸಿದ್ದರು. ಆದರೆ ಈ ದಿನಗಳಲ್ಲಿ ಕುಕ್ಕೆ ಸೇರಿದಂತೆ ಬೆಟ್ಟ ಪ್ರದೇಶದಲ್ಲಿ ಅತ್ಯಧಿಕ ಮಳೆ ಸುರಿದ ಕಾರಣ ಚಾರಣಿಗರಿಗೆ ಚಾರಣ ತೆರಳು ಕಷ್ಟವಾಗಿತ್ತು.

. . . . . . .

ಮಳೆಯು ಹೆಚ್ಚು ಇರುವ ಕಾರಣದಿಂದ ಚಾರಣ ದಾರಿಯು ಜಾರುತ್ತಿದ್ದು ಕೆಲವು ಚಾರಣಿಗರಿಗೆ ಸಣ್ಣ ಪುಟ್ಟ ತೊಂದರೆಗಳು ಉಂಟಾಗಿರುತ್ತದೆ. ಹಾಗೂ ಈ ಸಮಯದಲ್ಲಿ ಜಿಗಣೆಗಳು ಹೆಚ್ಚು ಇರುವುದೂ ಕೂಡ ಚಾರಣಿಗರಿಗೆ ಕಷ್ಟವಾಗಿರುತ್ತದೆ. ಕೆಲವು ಚಾರಣಿಗರು ಪೂರ್ತಿ ಚಾರಣ ಮಾಡದೇ ಅರ್ಧಕ್ಕೆ ಹಿಂದಿರುಗಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯ ಮುನ್ನಚೂಚನೆಯನ್ನು ಹವಾಮಾನ ಇಲಾಖೆ ನೀಡಿದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ ಈ ಆದೇಶ ನೀಡಿದೆ. ಆದಿತ್ಯವಾರವೂ ಹೆಚ್ಚಿನ ಸಂಖ್ಯೆಯಲ್ಲಿ ಚಾರಣಾಸಕ್ತರು ಕುಮಾರಪರ್ವತಕ್ಕೆ ತೆರಳಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!