
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲೆ ಇದರ ವತಿಯಿಂದ ಗಾಂಧೀಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಅ.3 ರಂದು ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ರಾಜ್ಯಸಭಾ ಸದಸ್ಯರಾದ ಡಾ| ಡಿ.ವಿರೇಂದ್ರ ಹೆಗ್ಗಡೆ , ಶ್ರೀ ಕ್ಷೇತ್ರ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ, ಸುಳ್ಯ ಸೈಂಟ್ಸ್ ಬ್ರಿಜಿಡ್ಸ್ ನ ಧರ್ಮಗುರು ವಿಕ್ಟರ್ ಡಿ,ಸೋಜಾ, ಡಾ| ಎಲ್.ಎಚ್.ಮಂಜುನಾಥ್, ರಾಜಣ್ಣ ಕೊರವಿ, ಶ್ರೀ ಪದ್ಮನಾಭ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


