Ad Widget

ಸುಬ್ರಹ್ಮಣ್ಯ : ಕಾರಿನ ಗಾಜು ಒಡೆದು  ಕಳ್ಳತನ ಮಾಡಿದಾತನನ್ನು ಬಂಧಿಸಿದ ಪೊಲೀಸರು

. . . . . . .

ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ ಮಾಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳಿಧರ ನಾಯಕ್, ಕರುಣಾಕರ ಹಾಗೂ ಸಿಬ್ಬಂದಿಗಳ ಎರಡು ತಂಡ ರಚಿಸಿ
ಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದರು. ಇಂದು ಸುಬ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಪ್ರಭಾಕರ ಹೊನ್ನವಳ್ಳಿ ಎಂಬಾತನನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಭಕ್ತಾಧಿಯೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆದಿತ್ತು. ಅವರು ಕೆ.ಎಲ್ 60 ಎನ್ 4003 ಕಾರಿನಲ್ಲಿ ಸುಬ್ರಹ್ಮಣ್ಯ ಕ್ಕೆ ಬಂದು ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ, ದೇವಸ್ಥಾನಕ್ಕೆ ಹೋಗಿ ಬಳಿಕ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಕಾರಿನ ಬಳಿ ಬಂದು ನೋಡಿದಾಗ, ಕಾರಿನ ಹಿಂಬದಿಯ ಗಾಜನ್ನು ಪುಡಿ ಮಾಡಿ ಕಾರಿನಲ್ಲಿದ್ದ ಎರಡು ಬ್ಯಾಗ್ ಗಳನ್ನು ಯಾರೋ ಕಳ್ಳರು ತೆಗೆದುಕೊಂಡು ಹೋಗಿದ್ದರು. ಕಳವಾಗಿರುವ ಬ್ಯಾಗ್ ನಲ್ಲಿ ಅಂದಾಜು 14 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಹಾಗೂ ಆಧಾರ ಕಾರ್ಡ್ ,ಎಟಿಎಂ, ಇತ್ತೆಂದು ಈ ಬಗ್ಗೆ ಕೇರಳ ನಿವಾಸಿ ಸುಯಿಶ್‌ ಟಿ ಸಿ ಎಂಬವರ ದೂರಿನಲ್ಲಿ ತಿಳಿಸಿದ್ದರು.

ಆರೋಪಿಯನ್ನು ಬಂಧಿಸುವಲ್ಲಿ ಸುಬ್ರಹ್ಮಣ್ಯ ಪೊಲೀಸ್
ಠಾಣಾಧಿಕಾರಿ ಕಾರ್ತಿಕ್ ಅವರ ನೇತೃತ್ವದಲ್ಲಿ ಮುರಳಿಧರ್ (ತನಿಖೆ )ರೊಂದಿಗೆ
ಠಾಣಾ ಸಿಬ್ಬಂದಿಗಳಾದ -ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಸಹಕರಿಸಿದ್ದಾರೆ.

ಆರೋಪಿಯ ಮೇಲೆ ಹೊನ್ನವಳ್ಳಿ ಸೇರಿದಂತೆ ಬೇರೆ ಬೇರೆ ಠಾಣೆಗಳಲ್ಲಿ ಹಲವು ಪ್ರಕಾರಣಗಳಿದ್ದು ದೇವಸ್ಥಾನ ಗಳಿಗೆ ಹೋಗಿ ಉಪಾಯದಿಂದ ಯಾರು ಇಲ್ಲದ ಸಮಯ ನೋಡಿಕೊಂಡು ಲೋಹದಂತ ಆಯುಧಗಳನ್ನು ಬಳಸಿ ಕಾರಿನ ಗಾಜುಗಳನ್ನು ಪುಡಿ ಮಾಡಿ ಬೇಲೆ ಬಾಳುವ ವಸ್ತುಗಳನ್ನು ಕದಿಯೋ ಚಾಳಿ ಬೆಳೆಸಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷ ಪೊಲೀಸ್ ಅಧಿಕಾರಿಗಳ ಈ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!