ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಎನ್ ಎಸ್ ಎಸ್ ಸಹಯೋಗದಲ್ಲಿ ಕೆಸರ್ ಡ್ ಒಂಜಿ ದಿನ ಎಂಬ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಯಿತು. ಈ ಕ್ರೀಡಾಕೂಟದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ಪಿ ಅಧ್ಯಕ್ಷತೆ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕರಾದ ರಾಕೇಶ್ ರೈ ಕೆಡಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕೃಷಿ,ಕೃಷಿಕರ ಮಹತ್ವ ಅರಿಯುವ ಅಗತ್ಯವಿದೆ ಹಾಗೂ ಇರುವ ಒಂದು ಭೂಮಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.ವೇದಿಕೆಯಲ್ಲಿ ಜನಾರ್ಧನ ಪೆರ್ಲೊಡಿ ಮತ್ತು ಬಾಲಕೃಷ್ಣ ಗೌಡ ಕೋಳಿಗದ್ದೆ ಉಪಸ್ಥಿತರಿದ್ದು ಶುಭ ಹಾರೈಸಿದರು.ಸಭೆಯಲ್ಲಿ ಎನ್ ಎಸ್ ಎಸ್ ಸಂಚಾಲಕರಾದ ರಂಜಿತ್ ಪಿ.ಜೆ ಮತ್ತು ಶ್ರೀಮತಿ.ಶಾಂತಿ ಕೆ ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕು.ರಶ್ಮಿ ಸ್ವಾಗತಿಸಿ, ಕು.ಕಾರ್ತಿಕ ವಂದಿಸಿದರು ಕು.ಕೀರ್ತನ ಕಾರ್ಯಕ್ರಮ ನಿರೂಪಿಸಿದರು .ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.