Ad Widget

ಮಡಪ್ಪಾಡಿ : ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಹಾಗೂ ಯುವಕ ಮಂಡಲ (ರಿ.) ಮಡಪ್ಪಾಡಿ ಸಹಯೋಗದಲ್ಲಿ ದಿನಾಂಕ 23/10/23ರ ಸೋಮವಾರ ಸಂಜೆ ಗಂಟೆ 7.30 ಕ್ಕೆ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷರಾದ ಹೇಮಕುಮಾರ್ ಹಾಡಿಕಲ್ಲು ವಹಿಸಿದ್ದರು. ಮಾಜಿ ಎ.ಪಿ.ಯಂ.ಸಿ ಅದ್ಯಕ್ಷರಾದ ವಿನಯ ಕುಮಾರ್ ಮುಳುಗಾಡು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ಮೇನಾಲ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಜಯರಾಂ, ಮಡಪ್ಪಾಡಿ ಸೊಸೈಟಿ ಅಧ್ಯಕ್ಷರಾದ ಪಿ.ಸಿ ಜಯರಾಮ, ಮಡಪ್ಪಾಡಿ ಪಂಚಾಯತು ಸದಸ್ಯರಾದ ಜಯರಾಮ ಹಾಡಿಕಲ್ಲು, ಮಡಪ್ಪಾಡಿ ಶಾಲೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಚಿನ್ ಬಳ್ಳಡ್ಕ, ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ನಿರ್ದೇಶಕರಾದ ಲೋಹಿತ್ ಬಾಳಿಕಳ, ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರಾದ ಧನ್ಯಕುಮಾರ್ ದೇರುಮಜಲು ಉಪಸ್ತಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಳೆದ ಸಾಲಿನ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಪಡೆದ 3 ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಶೇ 80 ಕ್ಕಿಂತ ಅಧಿಕ ಅಂಕ ಪಡೆದ 14 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹೇಮಕುಮಾರ್ ಹಾಡಿಕಲ್ಲು ಸ್ವಾಗತಿಸಿದರು. ಸದಾನಂದ ಬಲ್ಕಜೆ ವಂದಿಸಿದರು. ರಂಜಿತ್ ಶೀರಡ್ಕ ಕಾಯ೯ಕ್ರಮ ನಿರೂಪಿದರು. ಮನ್ವಂತ್ ಗೋಳ್ಯಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಮತ್ತು ಯುವಕ ಮಂಡಲ ರಿ ಮಡಪ್ಪಾಡಿ ಇದರ ಸದಸ್ಯರುಗಳು ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading