- Friday
- April 4th, 2025

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 154ನೇ "ಮಹಾತ್ಮ ಗಾಂಧಿ ಜಯಂತಿ "ಹಾಗೂ 119ನೇ" ಲಾಲ್ ಬಹುದ್ದೂರ್ ಶಾಸ್ತ್ರಿ"ಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಚಂದ್ರಶೇಖರ್ ಪಾರೆಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ದಿನದ ಮಹತ್ವವನ್ನು ತಿಳಿಸಿದರು. ಕುಮಾರಿ ಸುಧಾರಾಣಿಯವರು ಈ ಇಬ್ಬರು ಮಹಾನ್ ವ್ಯಕ್ತಿಗಳ ಜೀವನದ ಘಟನೆಗಳನ್ನು ಕಥಾರೂಪವಾಗಿ ತಿಳಿಯಪಡಿಸಿ ಅವರ...

ಸುಳ್ಯ ಬಿಜೆಪಿ ಮಂಡಲ ವತಿಯಿಂದ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರತಿ ಮುರುಳ್ಯ ಅವರು ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯ ಜನ್ಮ ದಿನಾಚರಣೆಯ ಈ ಶುಭದಿನದಂದು ನಾವು ಸು ಳ್ಯ ಬಿಜೆಪಿ ಮಂಡಲ ವತಿಯಿಂದ ವಿವಿಧ ಸಂಘ-ಸಂಸ್ಥೆಗಳ...

ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲದ ನೇತೃತ್ವದಲ್ಲಿ ಭಸ್ಮಡ್ಕ, ಕುರುಂಜಿ, ಕೇರ್ಪಳ ಊರವರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಕಾರ್ಯಕ್ರಮ ಅ.2 ರಂದು ಭಸ್ಮಡ್ಕದಲ್ಲಿ ನಡೆಯಿತು.ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಕೆ.ಸಿ.ಶಿವಾನಂದರು ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಮಂಡಲ ಪ್ರಧಾನ ಕೆ.ಸಿ.ಸದಾನಂದ, ನ.ಪಂ. ಸದಸ್ಯ ಸುಧಾಕರ ಕುರುಂಜಿಭಾಗ್, ಯುವಕ ಮಂಡಲದ...

ನವದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮರಳಿಸಲು ಅಥವಾ ವಿನಿಮಯ ಮಾಡಲು ನೀಡಲಾಗಿದ್ದ ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಕ್ಟೋಬರ್ 7ರವರೆಗೆ ವಿಸ್ತರಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಆರ್ಬಿಐ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ಗೆ ಮರಳಿಸಲು ಅಥವಾ ವಿನಿಮಯ ಮಾಡಲು ಈ ಹಿಂದೆ ನಿಗದಿಪಡಿಸಿದ್ದ ಅವಧಿಯೂ...

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಅ.3ರಿಂದ ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಠಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ...

ವಿನೋಬನಗರದ ವಿವೇಕಾನಂದ ಹಿ.ಪ್ರಾ.ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿಮಿಷ ಮಹಾಬಲಡ್ಕ ಕೈಯಲ್ಲಿ ಅರಳಿದ ಮಹಾತ್ಮ ಗಾಂಧೀಜಿಯ ಚಿತ್ರ. ಈಕೆ ಜಾಲ್ಸೂರು ಗ್ರಾಮದ ಮಹಾಬಲಡ್ಕ ನವೀನ್ ಹಾಗೂ ಉಷಾ ದಂಪತಿಗಳ ಪುತ್ರಿ.

ಪೆರಾಜೆ : ಚಿಗುರು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ ಅ.1 ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಭುವನ್ ಕುಂಬಳಚೇರಿ,ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ,ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್ ಮಜಿಕೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಬೆಂಗಳೂರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಧೀಶರಾದ ಶ್ರೀಪೂರ್ಣಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡುತ್ತಾ ‘ಗಾಣಿಗ ಸಮುದಾಯವನ್ನು ಒಟ್ಟಾಗಿಸಲು ಸಂಘಟನೆ ಸ್ಥಾಪಿಸಲಾಗಿದೆ. ಆ ಬಳಿಕ ಸಮುದಾಯವು ಸಾಕಷ್ಟು ಸಂಘಟಿತರಾಗಿದ್ದಾರೆ, ಸಮುದಾಯದ ಮಧ್ಯೆ ಸಂಬಂಧಗಳು ಬೆಳೆದಿದೆ. ಸಂಘಟನೆಯನ್ನು ಕಟ್ಟಿ ಬೆಳೆಸುವವರಿಗೆ ಸಮುದಾಯ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನದ ವತಿಯಿಂದ...

ಸ್ವಚ್ಚತಾ ಕಾರ್ಯಕ್ರಮ ಗಾಂಧಿ ಜಯಂತಿ, ಸ್ವಚ್ಚತಾ ಪಕ್ವಾಡ ಹಾಗೂ ಸ್ವಚ್ಚತಾ ಹಿ ಸೇವಾ ಪ್ರಯುಕ್ತ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಭಾರತ ಸರಕಾರದ ನಿರ್ದೇಶದಂತೆ ಸ್ವಚ್ಚತಾ ಕಾರ್ಯಕ್ರಮವನ್ನು ಕೆ.ವಿ.ಜಿ ಆಯುರ್ವೇದ ವ್ಶೆದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇದರ ಎನ್.ಎಸ್.ಎಸ್. ಘಟಕದಿಂದ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ನಗರ, ವಿವೇಕಾನಂದ ಸರ್ಕಲ್, ಪಾರಂಪರಿಕ ತಾಣವಾದ ಶ್ರೀ...

All posts loaded
No more posts