
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿನಲ್ಲಿ ಶಾರದಾ ಪೂಜೆ ಮತ್ತು ಸತ್ಯನಾರಾಯಣ ಪೂಜೆಯು ಬುಧವಾರ ನಡೆಯಿತು. ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಅರ್ಚಕ ಗಣೇಶ್ ದೀಕ್ಷಿತ್ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಿದರು. ಈ ಪ್ರಯುಕ್ತ ಭಜನಾ ಕಾರ್ಯಕ್ರಮ ನೆರವೇರಿತು. ಭಜನಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.ಪೂಜೆಯ ವಿದ್ಯಾರ್ಥಿಗಳಾದ ಸಮಂತ್ ಮತ್ತು ಅನ್ವಿತ್ ನೇತೃತ್ವದಲ್ಲಿ ಆಕರ್ಷಕ ಮಂಟಪವನ್ನು ನಿರ್ಮಿಸಲಾಗಿತ್ತು.
ಈ ಸಂದರ್ಭದಲ್ಲಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾಲೇಜಿನ ಕಾರ್ಯದರ್ಶಿ ಡಾ.ನಿಂಗಯ್ಯ, ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ನಿವೃತ್ತ ಪ್ರಾಂಶುಪಾಲ ಎಸ್.ಎನ್.ಭಟ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ, ಉಪಾಧ್ಯಕ್ಷ ಚಿದಾನಂದ ಕಂದಡ್ಕ, ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನೇಶ್ ಶಿರಾಡಿ, ಕುಕ್ಕೆ ದೇವಳದ ಶಿವಸುಬ್ರಹ್ಮಣ್ಯ ಭಟ್, ಕಲಾವಿದ ಗಣೇಶ್ ಪರ್ವತಮುಖಿ ಸೇರಿದಂತೆ ಉಪನ್ಯಾಸಕರು, ಅಧ್ಯಾಪಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.
