
ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನ 1 ಗಂಟೆ 01 ನಿಮಿಷ 16 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಇವರು ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದು, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪಲ್ಲೋಡಿ(ಪಂಜ) ಶ್ರೀ ಜಗನ್ನಾಥ ಶೆಟ್ಟಿ ಮತ್ತು ಶ್ರೀಮತಿ ಜಯಲಕ್ಷ್ಮಿ.ಜೆ ಶೆಟ್ಟಿ ದಂಪತಿಗಳ ಪುತ್ರಿ.