Ad Widget

ಶೈಲೇಶ್ ಅಂಬೆಕಲ್ಲು ಅವರಿಗೆ ಯುವಜನ ಸಂಯುಕ್ತ ಮಂಡಳಿ ವತಿಯಿಂದ ಸನ್ಮಾನ

ಯುವಜನ ಸಂಯುಕ್ತ ಮಂಡಳಿ ವತಿಯಿಂದ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ನ.4 ರಂದು ಮಂಡಳಿಯ ಸಭಾಭವನದಲ್ಲಿ ನಡೆಯಿತು. ದ.ಕ. ಜಿಲ್ಲೆಯ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷರಾಗಿದ್ದು, 25 ವರ್ಷಗಳಿಂದ ಯುವಜನ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಿರುವ ಶೈಲೇಶ್ ಅಂಬೆಕಲ್ಲುರವರು ಇದೀಗದೇವಚಳ್ಳ ಗ್ರಾಮ ಪಂಚಾಯತ್‌ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಸಂ.ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ. ಎಂ. ವಹಿಸಲಿದ್ದರು. ಶೈಲೇಶ್ ಅಂಬೆಕಲ್ಲು ಅವರನ್ನು ಯು.ಸಂ.ಮಂಡಳಿಯ ಪೂರ್ವಾಧ್ಯಕ್ಷ ಹಮೀದ್ ಇಡ್ನೂರು ಅಭಿನಂದಿಸಿ ಮಾತನಾಡಿದರು. ಯು.ಸಂ.ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪಿ.ಎಸ್. ಗಂಗಾಧರ, ಖಜಾಂಜಿ ದಯಾನಂದ ಪಾತಿಕಲ್ಲು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಯುವ ಜನ ಸಂಯುಕ್ತ ಮಂಡಳಿಯ ಕಾರ್ಯದರ್ಶಿ ಗುರುರಾಜ್ ಅಜ್ಜಾವರ ಸ್ವಾಗತಿಸಿ, ಜತೆ ಕಾರ್ಯದರ್ಶಿ ದಿನೇಶ್ ಹಾಲೆಮಜಲು ವಂದಿಸಿದರು. ಉಪಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading