
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಇದ್ದಕ್ಕಿದ್ದಂತೆಯೇ ಭೂಮಿ ಕುಸಿತಗೊಂಡ ಘಟನೆ ನಡೆದಿದೆ. ಸಮತಟ್ಟುಗೊಳಿಸಿ ಇಂಟರ್ ಲಾಕ್ ಹಾಕಿದ ಜಾಗ ಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಕೂಡ ಬೀಳುವ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.
