Ad Widget

ಆಲೆಟ್ಟಿ ಗ್ರಾಮ ಪಂಚಾಯತ್ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ಧಿಡೀರ್ ದಾಳಿ – ಪರಿಶೀಲನೆ ?

ಆಲೆಟ್ಟಿ ಗ್ರಾಮ ಪಂಚಾಯತ್ ಗೆ ಇಂದು ಲೋಕಾಯುಕ್ತ ಅಧಿಕಾರಿಗಳು ಧಿಢೀರ್ ದಾಳಿ ನಡೆಸಿದ್ದು ಈ ಹಿಂದೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತಾಗಿ ದೂರುಗಳು ಸಲ್ಲಿಕೆಯಾಗಿದ್ದು ಇದರ ಬಗ್ಗೆ ಇದೀಗ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆನ್ನಲಾಗಿದೆ. ಈ ಹಿಂದೆ ಮಾಣಿಮರ್ಧು ಸೇತುವೆ ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ ಈ ಹಿಂದೆ ನೀಡಿದ ದೂರಿನ ಮೇರೆಗೆ ಬಂದಿದ್ದಾರೆ ಹಾಗೂ ನಮಗೆ ಅವರು ಮುಂದಿನ ದಿನಗಳಲ್ಲಿ ಬರಲು ಹೇಳಿದ್ದಾರೆ. ಅದು ಕಾನೂನಿನ ರೀತಿಯಲ್ಲಿ ನಡೆಯುತ್ತದೆ ಎಂದರು. ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು. ಈ ದಾಳಿಯ ಕುರಿತು ಇದೀಗ ನಾಗರೀಕರಲ್ಲಿ ಕುತೂಹಲ ಮೂಡಿಸಿದ್ದು, ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.‌

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!