ಹಿಂದೂ ಸಮಾಜದ ಒಳಿತಿಗಾಗಿ ಜಾಗೃತಿಗಾಗಿ ದುಡಿಯುವ ಕಾರ್ಯಕರ್ತರನ್ನು ಹಿಂದೂ ವಿರೋಧಿ ಸರ್ಕಾರ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಗಡಿಪಾರು ಮಾಡುವ ಆದೇಶದ ಮೂಲಕ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಹುನ್ನಾರ ನಡೆಯುತ್ತಿದ್ದು ಸರಕಾರದ ಈ ದೋರಣೆಯನ್ನು ವಿಶ್ವಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಬಲವಾಗಿ ಖಂಡಿಸುತ್ತದೆ. ಸದಾ ಗೋಮಾತೆಯ ರಕ್ಷಣೆಯಲ್ಲಿ ತೊಡಗಿರುವ ಹಾಗೂ ಹಿಂದೂ ಸಮಾಜದ ಒಳಿತಿಗಾಗಿ ಕೆಲಸ ಮಾಡುವ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬೆದರಿಸುವ ತಂತ್ರಕ್ಕೆ ಹಿಂದೂ ವಿರೋಧಿ ಸರಕಾರ ಕೈ ಹಾಕಿದೆ. ಮುಂದಿನ ದಿನಗಳಲ್ಲಿ ಹಿಂದೂ ಸಮಾಜ ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಬಹುದು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರ ಜೊತೆಗೆ ಸದಾ ಬೆಂಬಲವಾಗಿ ನಿಲ್ಲುತ್ತದೆ. ಸರ್ಕಾರ ಈ ವಿಚಾರವನ್ನು ಇಲ್ಲಿಗೆ ಕೈಬಿಡಬೇಕು. ಇಲ್ಲವಾದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ ಎಚ್ಚರಿಸಿದ್ದಾರೆ.
- Tuesday
- November 26th, 2024