ಪೆರುವಾಜೆಯ ಡಾ| ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಸಮಾಜ ಕಾರ್ಯ ವಿಭಾಗ ಹಾಗೂ ಗ್ರಾಮ ಪಂಚಾಯತ್ ಮಂಡೆಕೋಲು ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಆರೋಗ್ಯ ಮಾಹಿತಿ ಕಾರ್ಯಕ್ರಮ ನ.23 ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಸುಪ್ರಿಯಾ ಪಿ. ಆರ್., ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಪ್ರತಿಮಾ ಹೆಬ್ಬಾರ್, ಪಿಡಿಓ ರಮೇಶ ಕೆ., ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ಪೂಜಾ ನಿರೂಪಿಸಿದರು.
ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ಕು ನಿಶ್ಚಿತಾ ವಂದಿಸಿದರು.